ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ; ಸಂಚಾರ ಅಸ್ತವ್ಯಸ್ತ

Vishwanath S
Updated On : 4 Apr 2013, 10:35 am

ವಿಟ್ಲ: ಲಾರಿಯೊಂದು ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಲವು ತಾಸುಗಳವರೆಗೆ ಸಂಚಾರದಲ್ಲಿ ಅಸ್ತವ್ಯಸ್ತಗೊಂಡ ಘಟನೆ ವಿಟ್ಲ ಸಮೀಪದ ಮೇಗಿನಪೇಟೆ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಪುತ್ತೂರು ಕಡೆಯಿಂದ ಮೇಗಿನಪೇಟೆ ಕಲ್ಲಕಟ್ಟ ಎಂಬಲ್ಲಿರುವ ವ್ಯಕ್ತಿಯೊಬ್ಬರ ಮನೆಗೆ ಸೀಟುಗಳನ್ನು ಸಾಗಿಸುತ್ತಿದ್ದ ಲಾರಿ ತಿರುವೊಂದರಲ್ಲಿ ರಸ್ತೆ  ಬದಿಯಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ರಸ್ತೆ ಮಧ್ಯೆ ಬಿದ್ದಿದ್ದು, ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಮೆಸ್ಕಾಂ ಶಾಖಾಧಿಕಾರಿ ಪ್ರವೀಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನರಿಕು ರಸ್ತೆ ಮಧ್ಯೆ ಬಿದ್ದಿದ್ದ ಕಂಬ, ತಂತಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ದುರಸ್ತಿಗೊಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement