ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದು ನೇಮೋತ್ಸವ

Vishwanath S
Updated On : 5 Apr 2013, 11:05 am

ಮೂಲ್ಕಿ; ಮೂಲ್ಕಿ ಸಮೀಪದ ಕವತ್ತಾರು ಗುಡ್ಡೆ ಅಂಗಡಿಯ ದೇವಾಡಿಗ ಸಮಾದ ಅಡ್ಯರಣ್ಯ ಮೂಲಸ್ತಾನದಲ್ಲಿ ಏ.5ರಂದು ಬ್ರಹ್ಮಕಲಶಾಭಿಷೇಕ, ಆಶ್ಲೇಷಾ ಬಲಿ, ನಾಗತನುತರ್ಪಣ ಹಾಗೂ ಧರ್ಮ ನೇಮೋತ್ಸವವು ಜರುಗಲಿದೆ. 5ರ ಬೆಳಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕೃಷ್ಣ ಸಾಮಗರ ನೇತೃತ್ವದಲ್ಲಿ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ. ಉಡುಪಿ ಪೇಜಾವರ ಮಠದ ವಿಶ್ವೇಶ್ವರ ಪ್ರಸನ್ನ ತೀರ್ಥರು ಹಾಗೂ ಸುಬ್ರಹ್ಮಣ್ಯ ಮಠಾಧೀಶ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ ನೀಡಲಿದ್ದು ಉಡುಪಿ ಬಡಗುಪೇಟೆ ಶ್ರೀ ವಾಸುಕಿ ಅನಂತಪದ್ಮನಾಭ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣಮೂರ್ತಿ ಸಾಮಗ ಮತ್ತು ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಶ್ರೀಪತಿ ಉಪಾಧ್ಯಾಯ ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ವಹಿಸಲಿದ್ದಾರೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ನಾಗ ತನು ತರ್ಪಣ, ರಾತ್ರಿ ವೇದಮೂರ್ತಿ ಹಯಗ್ರೀವ ಪಡ್ಡಿಲಾಯ ಪಂಜರಿಂದ ಶ್ರೀ ನಾಗ ಸಂದರ್ಶನ, ರಾತ್ರಿ ಧರ್ಮ ನೇಮೋತ್ಸವವು ಜರುಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement