ಕಾರು-ಲಾರಿ ಡಿಕ್ಕಿ; ಸಂಚಾರ ವ್ಯತ್ಯಯ
ವಿಟ್ಲ: ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ಕಾರು ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಗಂಟೆ ಗಟ್ಟಲೆ ವಾಹನ ದಟ್ಟಣೆ, ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಕಾಸರಗೋಡು ಕಡೆ ತಿಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಕಾಸರಗೋಡು ಕಡೆ ಸಾಗುವ ಲಾರಿಯ ನಡುವೆ ಡಿಕ್ಕಿ ಸಂಭವಿಸಿದೆ.
ಇದರಿಂದ ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ನಿಂತು ಹೋಗಿತ್ತು. ಕಳೆದ ವಾರವಷ್ಟೇ ಇದೇ ಪರಿಸರದಲ್ಲಿ ನಿಲ್ಲಿಸಿದ ಕಾರಿನಿಂದ ಸಂಚಾರ ದಟ್ಟಣೆ ಸೃಷ್ಟಿಯಾಗಿತ್ತು.