ಪುತ್ತೂರು ದೇವಾಲಯ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಇಲ್ಲಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯಲಿರುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಭಾನುವಾರ ಬೆಳಗ್ಗೆ ನಡೆಯಿತು.
ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ, ಡಾ.ಎಂ.ಕೆ. ಪ್ರಸಾದ್ ಭಂಡಾರಿ, ಚಂದ್ರಶೇಖರ್ ರಾವ್ ಬಪ್ಪಳಿಗೆ, ಸಂಜೀವ ಮಠಂದೂರು, ಭಾಸ್ಕರ ರೈ ಕಂಟ್ರಮಲು, ಸಂತೋಷ್ ನಾಯ್ಕ್ ಮತ್ತಿತರರು ಇದ್ದರು.