ಇಂದಿನಿಂದ ಕಾಂಗ್ರೆಸ್ ಚುನಾವಣಾ ಪ್ರಚಾರ
ಬಂಟ್ವಾಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಯವರ ಚುನಾವಣಾ ಪ್ರಚಾರ ಕಾರ್ಯಕ್ಕೆ ಗುರುವಾರ ಅಧಿಕೃತ ಚಾಲನೆ ಸಿಗಲಿದೆ. ಬಿ.ಸಿ. ರೋಡಿನ ಪದ್ಮಾ ಪೆಟ್ರೋಲ್ ಪಂಪ್ನ ಮುಂಭಾಗದ ರೀಮಾ ಟವರ್ಸ್ನಲ್ಲಿ ಕಾಂಗ್ರೆಸ್ನ ಚುನಾವಣಾ ಕಾರ್ಯಾಲಯ 11 ರಂದು ಪೂರ್ವಾಹ್ನ 10 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಚಾರ ಸಮಿತಿ ಸಂಚಾಲಕ ಪಿಯುಸ್ ರೋಡ್ರಿಗಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.