ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಕಾಂಗ್ರೆಸ್ ಟಿಕೆಟ್ ಹಗರಣ ಸಿಬಿಐ ತನಿಖೆಯಾಗಲಿ: ಡೀವಿ

Lingaraj Badiger
Updated On : 10 Apr 2013, 11:17 am

ಸುಳ್ಯ: ಬಿಜೆಪಿ ಬಗ್ಗೆ ಯಾವಾಗಲೂ ಭ್ರಷ್ಟಾಚಾರದ ಆರೋಪ ಮಾಡುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್‌ಗಾಗಿ ನಾಯಕರು ಹಣ ಪಡೆಯುವ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈ ಕುರಿತಂತೆ ಸಿಬಿಐ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ. ಸದಾನಂದ ಗೌಡ ಹೇಳಿದರು. ಸುಳ್ಯದಲ್ಲಿ ನಡೆದ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಪ್ರಚಾರ ಸಭೆಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಯಡಿಯೂರಪ್ಪನವರು ಕೆಲವು ಬಿಜೆಪಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಅವರನ್ನು ಸೋಲಿಸಲು ಕಾರ್ಯತಂತ್ರ ಹೂಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಡಿವಿಎಸ್, ಈ ಯತ್ನದಲ್ಲಿ ಅವರು ಸಫಲರಾಗುವುದಿಲ್ಲ. ಅವರ ಹಿಟ್ ಲಿಸ್ಟ್‌ನಲ್ಲಿರುವವರ ಹೆಸರನ್ನು ನಾವೇ ಬಹಿರಂಗಪಡಿಸುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement