ಶ್ರೀ ರಾಮ ನಾಮ ಸಪ್ತಾಹ, ಜಾತ್ರೋತ್ಸವಕ್ಕೆ ಚಾಲನೆ
ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀ ರಾಮ ಕ್ಷೇತ್ರದಲ್ಲಿ 53ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ, ಶ್ರೀ ರಾಮ ಕ್ಷೇತ್ರದ ಪ್ರತಿಷ್ಠಾ ಮಹೋತ್ಸವ ಮತ್ತು ಮಹಾಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ ಶುಕ್ರವಾರ ಚಾಲನೆ ನೀಡಿದರು.
ಈ ಸಂದರ್ಭ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಶಿವಾನಂದ ನಾಯ್ಕ, ಶಾಸಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಪ್ರಭಾಕರ ಬಂಗೇರ, ಬಿಜೆಪಿ ಜಿಲ್ಲಾ ಪ್ರಭಾರಿ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ಕೆ. ಹರೀಶ್ ಕುಮಾರ್, ಅಖಿಲ ಭಾರತ ಬಿಲ್ಲವ ಸಂಘದ ಅಧ್ಯಕ್ಷ ನವೀನ್ಚಂದ್ರ ಡಿ. ಸುವರ್ಣ, ನಿವೃತ್ತ ಎಸ್.ಪಿ. ಪಿತಾಂಬರ ಹೆರಾಜೆ, ನಿವೃತ್ತ ಅರಣ್ಯಾಧಿಕಾರಿ ಪದ್ಮನಾಭ ಮಾಣಿಂಜ, ಬೆಳ್ತಂಗಡಿ ತಾಲೂಕು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪ್ರೇಮಾ ಉಮೇಶ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೂರ್ಯಪ್ರಕಾಶ್, ಧರ್ಮಸ್ಥಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭಾಕರ ಧರ್ಮಸ್ಥಳ, ಅಚ್ಯುತ ಪೂಜಾರಿ ಧರ್ಮಸ್ಥಳ, ಜಿ.ಪಂ. ಸದಸ್ಯ ಶೈಲೇಶ್ ಕುಮಾರ್, ತಾ.ಪಂ. ಸದಸ್ಯ ಬಾಲಕೃಷ್ಣ ಶೆಟ್ಟಿ, ಮಹಿಳಾ ಬಿಲ್ಲವ ವೇದಿಕೆ ಪ್ರಧಾನ ಕಾರ್ಯದರ್ಶಿ ಸುಜಾತ ಅಣ್ಣಿ ಪೂಜಾರಿ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪಿ.ಕೆ. ರಾಜು ಪೂಜಾರಿ, ಕೋಶಾಧಿಕಾರಿ ಜಯಶಂಕರ ಎಂ.ಬಿ., ಕಲ್ಮಂಜ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ರವಿ ಪೂಜಾರಿ ಬರೆಮೇಲು, ಬೆಳ್ತಂಗಡಿ ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ವಸಂತ ಪೂಜಾರಿ ಪುದುವೆಟ್ಟು, ಪುತ್ತೂರು ವಾಹನ ನಿರೀಕ್ಷಕ ಅಧಿಕಾರಿ ಚರಣ್ ಇತರರು ಇದ್ದರು.
19ರಂದು ಕ್ಷೇತ್ರದಲ್ಲಿ ಮಹಾ ಬ್ರಹ್ಮರಥೋತ್ಸವ ನಡೆಯಲಿದೆ.