ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಗಣೇಶ್ ರಾವ್ ಕಾಂಗ್ರೆಸ್ ಸೇರ್ಪಡೆ

Lingaraj Badiger
Updated On : 15 Apr 2013, 12:26 pm

ಮಂಗಳೂರು: ಬಿಜೆಪಿ ಪಕ್ಷದ ಮಹಾನಗರ ಪಾಲಿಕೆ ಮಾಜಿ ಸದಸ್ಯ ಗಣೇಶ್ ರಾವ್ ಸಹಿತ ಹಲವಾರು ಮಂದಿ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರ ಜನವಿರೋಧಿ ಧೋರಣೆ, ಭ್ರಷ್ಟಾಚಾರ ರೋಸಿ ಹೋಗಿ ಪಕ್ಷ ತೊರೆದಿದ್ದೇನೆ. ಮಂಗಳೂರು ನಗರ, ಪಡೀಲ್, ಬಜಾಲ್, ಮಂಗಳಾದೇವಿ, ಪಾಂಡೇಶ್ವರ, ಅತ್ತಾವರ, ಬೋಳಾರ ಪ್ರದೇಶದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಬೆಂಬಲಿಸಲು ಸಿದ್ಧರಿದ್ದಾರೆ ಎಂದು ಹೇಳಿದರು. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ, ಎಐಸಿಸಿ ಚುನಾವಣಾ ವೀಕ್ಷಕ ಪಿ.ಟಿ. ಥಾಮಸ್ ಅವರು ಸದಸ್ಯರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement