ಬಂಟ್ವಾಳ: ಇಂದು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಬಂಟ್ವಾಳ: ಇಲ್ಲಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಉಳಿಪಾಡಿ ಗುತ್ತು ರಾಜೇಶ್ ನಾಯ್ಕ್ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ರಮಾನಾಥ ರೈ, ಕೆಜೆಪಿ ಅಭ್ಯರ್ಥಿ ಇಬ್ರಾಹಿಂ ಕೈಲಾರ್ ಹಾಗೂ ಜೆಡಿಎಸ್ ಅಭ್ಯರ್ಥಿ 17 ರಂದು ನಾಮಪತ್ರ ಸಲ್ಲಿಸುವರು ಎನ್ನಲಾಗಿದೆ.
ಇಂದು ಚುನಾವಣಾ ಕಾರ್ಯಾಲಯ ಉದ್ಘಾಟನೆ
ಮಂಗಳೂರು: ಬಿಜೆಪಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯ ಏ. 15ರಂದು ಮಧ್ಯಾಹ್ನ 12ಕ್ಕೆ ಬಿಜೆಪಿ ಕಚೇರಿಯಲ್ಲಿ ಆರಂಭಗೊಳ್ಳಲಿದೆ. ಬಿಜೆಪಿ ಮುಖಂಡ ರುಕ್ಮಯ ಪೂಜಾರಿ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪಕ್ಷದ ಹಿರಿಯ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶ್ರೀಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.