ಪೂಜಾರಿ ಪಾದಯಾತ್ರೆ: ಟ್ರಾಫಿಕ್ ಜಾಮ್
ಮಂಗಳೂರು: ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ನಗರದಲ್ಲಿ ಪಾದಯಾತ್ರೆ ನಡೆಸಿ ಅಭ್ಯರ್ಥಿ ಜೆ.ಆರ್.ಲೋಬೊ ಪರ ಮತ ಯಾಚಿಸಿದರು. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ಗೆ ಮತ ನೀಡಿ ಎಂದು ವಿನಂತಿಸಿದರು. ಜೆ.ಆರ್.ಲೋಬೊ, ಕಾಂಗ್ರೆಸ್ ಜಿಲ್ಲಾ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಶಶಿಧರ ಹೆಗ್ಡೆ, ನವೀನ್ಡಿಸೋಜ, ಶಿವಕುಮಾರ್ ಡಿ.ಕೆ. ಇಥರರು ಇದ್ದರು. ಬಂಟ್ಸ್ ಹಾಸ್ಟೆಲ್ ವೃತ್ತ ಬಳಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು.