ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಹಿಳೆ ಸಾವು

Lingaraj Badiger
Updated On : 20 Apr 2013, 11:35 am

ಮಣಿಪಾಲ: ಇಲ್ಲಿನ ಹಿರೇಬೆಟ್ಟು ಗ್ರಾಮದ ಸದಾಶಿವನಗರ ಎಂಬಲ್ಲಿ ಮಹಿಳೆಯೊಬ್ಬರು ವಿಪರೀತ ಮದ್ಯಪಾನ ಮಾಡಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರು ಲಕ್ಷ್ಮೀ (70), ಈಕೆ ಏಕಾಂಗಿಯಾಗಿ ವಾಸಿಸುತ್ತಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಕಳೆದ ಒಂದು ವಾರದಿಂದ ವಿಪರೀತ ಮದ್ಯಪಾನ ಮಾಡಿದ್ದ ಅವರು ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದವರು ಎದ್ದಿರಲಿಲ್ಲ. ಈ ಬಗ್ಗೆ ಸ್ಥಳೀಯ ಸುಧೀರ್ ಪೂಜಾರಿ ಎಂಬವರು ಶುಕ್ರವಾರ ಬೆಳಗ್ಗೆ ಹೋಗಿ ನೋಡಿದಾಗ ಆಕೆ ಮೃತಪಟ್ಟಿದ್ದರು. ಈ ಬಗ್ಗೆ ಸುಧೀರ್ ಪೂಜಾರಿ ಅವರು ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗದು,  
ಮಣಿಪಾಲ: ಇಲ್ಲಿನ ಬಬ್ಬು ಸ್ವಾಮಿ ದೈವಸ್ಥಾನದ ಬಳಿಯ ಅಂಗಡಿಯೊಂದರಲ್ಲಿ ಗುರುವಾರ ರಾತ್ರಿ ಕಳ್ಳತನದ ಘಟನೆ ನಡೆದಿದೆ. ಭಾರತ್ ಸ್ಟೋರ್ ಎಂಬ ಹೆಸರಿನ ಈ ಅಂಗಡಿಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ಮುರಿದು ಒಳ ಪ್ರವೇಶಿಸಿ, ಮೇಜಿನಲ್ಲಿದ್ದ ರು. 11,000  ನಗದು ಹಾಗೂ 10 ಮೊಬೈಲ್ ಪೋನುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ ರು. 61,000. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಇಲ್ಲಿನ ಮಾಳ ಗ್ರಾಮದ ಮಂಜಲ್ತಾರ್ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಮೃತರು ಅಂತೋನಿ ಡಿ' ಸೋಜಾ (60) ಅವರು ತನಗಿರುವ ಅಸ್ತಮಾ ಕಾಯಿಲೆ ಮತ್ತು ವಿಪರೀತ ಶರಾಬು ಸೇವಿಸುವ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಸಮೀಪದ ನೇರಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮಹಿಳೆ ಮೇಲೆ ಹಲ್ಲೆ
ಕಾರ್ಕಳ: ಜಾಗದ ತಕರಾರಿಗೆ ಸಂಬಂಧಿಸಿದ್ದಂತೆ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಹೆಬ್ರಿಯಲ್ಲಿ ಗುರುವಾರ ನಡೆದಿದೆ. ಹೆಬ್ರಿ ಗ್ರಾಮದ ಮಂಜರಬೆಟ್ಟು ಎಂಬಲ್ಲಿ ಲತಾ ಹೆಗ್ಡೆ ಹಲ್ಲೆಗೊಳಗಾದವರು. ಇವರ ಪತಿಯ ಸಹೋದರನಾದ ಆರೋಪಿ ಉದಯ ಕುಮಾರ್ ಎಂಬವರು ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹೆಬ್ರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments