ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಐಪಿಎಲ್ ಬೆಟ್ಟಿಂಗ್: ಇಬ್ಬರು ವಶಕ್ಕೆ

Vishwanath S
Updated On : 21 Apr 2013, 1:31 am

ಉಪ್ಪಿನಂಗಡಿ: ಐಪಿಎಲ್ ಕ್ರಿಕೆಟ್ ಫಲಿತಾಂಶದ ಮೇಲೆ ಬೆಟ್ಟಿಂಗ್ ಮೂಲಕ ಹಣದ ವ್ಯವಹಾರ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರಮೇಶ್ ಹಾಗೂ ಚೇತು ಎಂಬವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಪ್ಪಿನಂಗಡಿಯ ಹಳೆ ಬಸ್ ನಿಲ್ದಾಣ ಬಳಿಯ ಅಂಗಡಿಯೊಂದರಲ್ಲಿ ಈ ರೀತಿಯ ವ್ಯವಹಾರ ನಡೆಸಲಾಗುತ್ತಿದೆ ಎಂಬ ದೂರಿನ್ವಯ ಮೂವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಿಚಾರಣೆ ನಡೆಸಿದ ಬಳಿಕ ರಮೇಶ್ ಮತ್ತು ಚೇತು ಎಂಬಿಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮತ್ತೊಬ್ಬನನ್ನು ಪ್ರಕರಣಕ್ಕೆ ಸಂಬಂಧಿಸದ ವ್ಯಕ್ತಿ ಎಂದು ಪರಿಗಣಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement