ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಂಗಳೂರು: ನೆಹರೂ ಮೈದಾನಕ್ಕೆ ಎಸ್‌ಪಿಜಿ, ಉಸ್ತುವಾರಿ ಭೇಟಿ

Lingaraj Badiger
Updated On : 24 Apr 2013, 11:22 am

ಮಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಏ.27ರಂದು ಮಂಗಳೂರಿಗೇ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಅಶೋಕ್ ತನ್ವಾರ್ ಮಂಗಳವಾರ ನೆಹರು ಮೈದಾನಕ್ಕೆ ಭೇಟಿ ನೀಡಿ ಪೂರ್ವಭಾವಿ ಪರಿಶೀಲನೆ ನಡೆಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅಶೋಕ್, ಸೋನಿಯಾ ಗಾಂಧಿ ಚಿಕ್ಕಮಗಳೂರಿಗೆ ಬೆಳಗ್ಗೆ 10 ಗಂಟೆಗೆ ಆಗಮಿಸಿದರೆ ಮಂಗಳೂರಿಗೆ 11.30ಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದರು.
ಸೋನಿಯಾ ಗಾಂಧಿ ಜಿಲ್ಲೆಗೆ ಆಗಮಿಸುತ್ತಾರೆ ಎಂದಾದರೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕಾರ್ಯಕ್ರಮಕ್ಕೆ ಲಕ್ಷಕ್ಕೂ ಮಿಕ್ಕಿ ಜನ ಆಗಮಿಸುವ ನಿರೀಕ್ಷೆ ಇದೆ ಎಂದರು.
ಎಸ್‌ಪಿಜಿ ಪರಿಶೀಲನೆ: ನೆಹರು ಮೈದಾನಕ್ಕೆ ಕೇಂದ್ರ ಎಸ್‌ಪಿಜಿ ತಂಡ ಸೋಮವಾರ ಮಧ್ಯಾಹ್ನ  ಆಗಮಿಸಿ ಪರಿಶೀಲನೆ ನಡೆಸಿತು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement