ಇಂದು ಬಂಟ್ವಾಳಕ್ಕೆ ವರುಣ್ ಗಾಂಧಿ
ಬಂಟ್ವಾಳ: ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಪ್ರಚಾರಕ್ಕೆ ಬಿಜೆಪಿ ಯುವ ನಾಯಕ, ಸಂಸದ ವರುಣ್ ಗಾಂಧಿ ಏ.26ರಂದು ನಗರಕ್ಕೆ ಆಗಮಿಸಿದ್ದಾರೆ. ಬಿ.ಸಿ. ರೋಡಿನ ಪದ್ಮಾ ಕಾಂಪ್ಲೆಕ್ಸ್ ಹಿಂಭಾಗದ ಮೈದಾನದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ನಡೆಯುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ವರುಣ್ ಗಾಂಧಿ ಮಾತನಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ಮಾಧ್ಯಮ ಪ್ರಮುಖ ಬಿ. ದಿನೇಶ್ ಭಂಡಾರಿ ತಿಳಿಸಿದ್ದಾರೆ.
ಫರಂಗಿಪೇಟೆಯಲ್ಲಿ ಇಂದು ಎಸ್ಡಿಪಿಐ ಪ್ರಚಾರ ಸಭೆ
ಬಂಟ್ವಾಳ: ಉಳ್ಳಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಬೃಹತ್ ಪ್ರಚಾರ ಸಭೆಯು ಏ.26 ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಸಭೆಗೆ ಮುಂಚಿತವಾಗಿ ಸಂಜೆ 5 ಗಂಟೆಯಿಂದ ಮಾರಿಪಳ್ಳದಿಂದ ಪಾದಯಾತ್ರೆ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ನಝೀರ್. ಟಿ ತಿಳಿಸಿದ್ದಾರೆ.