ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಇಂದಿನಿಂದ ಪೊದುಂಬಿಲ ದೇವಾಲಯ ಅಷ್ಟಬಂಧ ಬ್ರಹ್ಮಕಲಶೋತ್ಸವ

Lingaraj Badiger
Updated On : 29 Apr 2013, 11:54 am

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊದುಂಬಿಲ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.29ರಿಂದ ಮೇ 3ರರವೆರೆಗೆ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರಂದರ ರಾವ್ ತಿಳಿಸಿದ್ದಾರೆ. ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಈ ವಿವರ ನೀಡಿದರು.
ಸುಮಾರು 800 ವರ್ಷಗಳ ಇತಿಹಾಸವಿರುವ ಈ ದೇವಸ್ಥಾನದಲ್ಲಿ ಪಾಂಗಾಣ್ಣಾಯ ಮನೆತನದವರು ಆಡಳಿತ ನಡೆಸುತ್ತಿದ್ದು, ಶಿಥಿಲಗೊಂಡಿದ್ದ ದೇವಸ್ಥಾನವನ್ನು ಕಳೆದ 13 ವರ್ಷಗಳ ಹಿಂದೆ ಜೀರ್ಣೋದ್ಧಾರ ನಡೆಸಲು ಸಂಕಲ್ಪಿಸಿ ಸುಮಾರು ರು. 60 ಲಕ್ಷ ವೆಚ್ಚದಲ್ಲಿ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ ರಚಿಸಲಾಗಿದೆ. ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಗೌರವಾಧ್ಯಕ್ಷತೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಗಿದೆ.
ಏ.29ರಿಂದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಸುಬ್ರಹ್ಮಣ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭಾಗವಹಿಸಲಿದ್ದಾರೆ. ಊರಿನ ಭಕ್ತಬಾಂಧವರು  ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು. ಅನುವಂಶಿಕ ಅರ್ಚಕ ಮುರಳೀಧರ ಪಾಂಗಾಣ್ಣಾಯ, ಸ್ವಾಗತ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸ ರಾವ್, ಎ.ಎಸ್. ಲೋಕೇಶ್ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement