ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬಿಜೆಪಿ ವಿರುದ್ಧ ವ್ಯಾಪಕ ಅಪಪ್ರಚಾರ: ಡೀವಿ

Lingaraj Badiger
Updated On : 29 Apr 2013, 11:50 am

ಸುಳ್ಯ: ಅನಾಮಧೇಯ ಕರಪತ್ರಗಳು ಸೇರಿದಂತೆ ಬಿಜೆಪಿ ವಿರುದ್ಧ ವ್ಯಾಪಕ ಅಪಪ್ರಚಾರಗಳು ನಡೆಯುತ್ತಿವೆ, ಸಮೀಕ್ಷೆಗಳೆಲ್ಲವೂ ವಾಸ್ತವಕ್ಕೆ ವಿರುದ್ಧವಾದ ಫಲಿತಾಂಶಗಳನ್ನು ನೀಡುತ್ತಿದೆ. ಆದರೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಮೆಚ್ಚಿದ್ದು, ಈ ಬಾರಿಯೂ ಜನತೆ ಆಶೀರ್ವದಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಭಾನುವಾರ ಪಕ್ಷದ ಚುನಾವಣಾ ಕಚೇರಿಗೆ ಭೇಟಿ ನೀಡಿದ ಅವರು, ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಯಾವುದೇ ಗೊಂದಲಗಳಿಲ್ಲದೆ, ನಾಯಕರ ಕಿತ್ತಾಟವಿಲ್ಲದೆ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿರುವ ಬಿಜೆಪಿ ಕನಿಷ್ಠ 120-130 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮುಂದಿನ ಬಾರಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ಬಹುಸಂಖ್ಯಾತರ ಮೇಲೆ ಪ್ರಹಾರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ಮಸೂದೆ ಹಿಂಪಡೆಯುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ಸಂದರ್ಭ ಹೇಳಿದ್ದರೆ. ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮನವೊಲಿಸಲು ಬಹುಸಂಖ್ಯಾತರ ನಂಬಿಕೆಗಳ ಮೇಲೆ ಪ್ರಹಾರ ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಂದಿನ ದಿನಗಳಲ್ಲಿ ಬಹುಸಂಖ್ಯಾತರು ಇನ್ನಷ್ಟು ತೊಂದರೆಗಳನ್ನು ಎದುರಿಸಬೇಕಾದಿತು ಎಂದರು.
ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಎನ್. ಮನ್ಮಥ, ನಗರ ಪಂಚಾಯಿತಿ ಸದಸ್ಯರಾದ ಎನ್.ಎ. ರಾಮಚಂದ್ರ, ಪ್ರಕಾಶ್ ಹೆಗ್ಡೆ, ಪಿ.ಜಿ.ಎಸ್.ಎನ್. ಪ್ರಸಾದ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement