ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಗ್ರಾಪಂ ಸದಸ್ಯ ಟೈಟ್: ಸಿಕ್ಕವರೊಂದಿಗೆ ಫೈಟ್!

Lingaraj Badiger
Updated On : 2 Aug 2013, 11:09 am

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯಿತಿನ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯರೊಬ್ಬರು ಕಂಠಪೂರ್ತಿ ಮದ್ಯ ಸೇವಿಸಿ ಪಂಚಾಯಿತಿ ಕಚೇರಿಗೆ ತೆರಳಿ ಅಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಪದಗಳಿಂದ ನಿಂದಿಸಿ ರಂಪಾಟ ನಡೆಸಿದ ಘಟನೆ ಗುರುವಾರ ನಡೆದಿದ್ದು, ಬಳಿಕ ಆತ ಪೊಲೀಸರನ್ನು ಕಂಡು ಪರಾರಿಯಾಗಿದ್ದಾನೆ.
 ಗುರುವಾರ ಸಂಜೆ ಹೊತ್ತಿಗೆ ಕಂಠಪೂರ್ತಿ ನಶೆ ಏರಿಸಿಕೊಂಡು ಗ್ರಾಮ ಪಂಚಾಯಿತಿಗೆ ತೆರಳಿದ ಈ ಹಾಲಿ ಸದಸ್ಯ, ಅಲ್ಲಿ ರಂಪಾಟ ನಡೆಸಲು ಪ್ರಾರಂಭಿಸಿದ್ದ ಎನ್ನಲಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಡನೆ ಅಸಭ್ಯವಾಗಿ ವರ್ತಿಸಿ ಅವರನ್ನು ನಿಂದಿಸಿದ್ದಾರೆ. ಬಳಿಕ ಸಾಲೆತ್ತೂರು ಪೇಟೆಯಾದ್ಯಂತ ಕುಣಿಯುತ್ತಾ ಸಂಚರಿಸಿ ತನ್ನ ಎದುರುಗಡೆ ಸಿಕ್ಕಿದ್ದವರಿಗೆಲ್ಲ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ.  ಈ ರೀತಿಯಾಗಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಹಿರಿಯರು ಬುದ್ಧಿವಾದ ಹೇಳಿದರೂ ಅವರ ಮಾತಿಗೆ ಬೆಲೆ ಕೊಡದ ಈತ ತನ್ನ ನಶೆಯ ಅಮಲಿನಲ್ಲಿ ಬೀದಿಯಲ್ಲಿ ರಂಪಾಟ ಮುಂದುವರಿಸಿದ್ದಾರೆ. ಸಮಸ್ಯೆ ಹೆಚ್ಚಾಗುತ್ತಿದ್ದಂತೆ ಸಾರ್ವಜನಿಕರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರೂ ಅವರ ಸುಳಿವು ಪತ್ತೆಯಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement