ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಅಡಕೆಗೆ ಕೊಳೆರೋಗ: ಸಿಎಂ ಬಳಿ ನಿಯೋಗ- ಡೀವಿ

Vishwanath S
Updated On : 11 Aug 2013, 11:57 am

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಅಡಕೆ ಬೆಳೆಗೆ ಕೊಳೆರೋಗ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಕೋರಿ ಜಿಲ್ಲೆಯ ಸಚಿವರ ನೇತೃತ್ವದಲ್ಲಿ ಕ್ಯಾಂಪ್ಕೋ ಮತ್ತು  ಇನ್ನಿತರ ಬೆಳೆಗಾರರ ಸಂಘಟನೆಗಳ ನಿಯೋಗವನ್ನು ಮುಂದಿನ ವಾರ ಮುಖ್ಯಮಂತ್ರಿ ಬಳಿ ಕರೆದೊಯ್ಯಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಶನಿವಾರ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಟ್ಕಾ ನಿಷೇಧ ಹಿನ್ನೆಲೆಯಲ್ಲಿ ಗುಜರಾತ್‌ಗೆ ಕ್ಯಾಂಪ್ಕೋ ನಿಯೋಗ ತೆರಳಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಜೊತೆಗೂ ಮಾತುಕತೆ ನಡೆಸಲಾಗುವುದು. ಅಲ್ಲಿ ತಂಬಾಕು, ಅಡಕೆಯನ್ನು ನಿಷೇಧಿಸಿದ್ದಾರೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗುವುದು ಎಂದರು.
ಕೆಜೆಪಿ ಜೊತೆ ಉಪಚುನಾವಣೆಯಲ್ಲಿ ಬಿಜೆಪಿ ಮೈತ್ರಿ ವಿಚಾರವನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಕುರಿತಂತೆ ಈ ಉಪಚುನಾವಣೆಯ ಬಳಿಕ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸ್ಥಾನ ಗಳಿಸಲಿದೆ ಎಂದು ಡೀವಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement