ಬಿಎಸ್ಸೆನ್ಎಲ್ ಗುತ್ತಿಗೆ ಕಾರ್ಮಿಕರ ಸಮಸ್ಯೆ ನಿವಾರಣೆಗೆ ಮನವಿ
ಸುಬ್ರಹ್ಮಣ್ಯ: ಸರ್ಕಾರಿ ಸಾಮ್ಯದ ಬಿಎಸ್ಸೆನ್ಎಲ್ ಸಂಸ್ಥೆಯಲ್ಲಿ ಗುತ್ತಿಗೆ ಪದ್ಧತಿ ರದ್ದುಗೊಳಿಸಿ, ಈಗಾಗಲೇ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಮತ್ತು ದಿನಕೂಲಿ ನೌಕರರ ಕೆಲಸ ಕಾಯಂಗೊಳಿಸುವಂತೆ ಕರ್ನಾಟಕ ರಾಜ್ಯ ಬಿಎಸ್ಸೆನ್ಎಲ್ ಪರ್ಮನೆಂಟ್ ವರ್ಕರ್ಸ್ ದ.ಕ. ಜಿಲ್ಲಾ ಸಮಿತಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ನೀಡಿ ಒತ್ತಾಯಿಸಿದೆ. ರಾಜ್ಯ ಸಮಿತಿ ನಿರ್ಣಯದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 12ರಂದು ಜಿಲ್ಲಾ ಸಮಿತಿಗಳಲ್ಲೂ ಸಂಸದರಿಗೆ ಮನವಿ ನೀಡಿ, ಈ ಬಗ್ಗೆ ಸಂಸತ್ನಲ್ಲಿ ಧ್ವನಿ ಎತ್ತಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಒತ್ತಾಯಿಸಲಾಗಿದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.