ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

19ರಂದು ರೈತ ಸಂಘದಿಂದ ಹಕ್ಕೊತ್ತಾಯ ಚಳವಳಿ

Rashmi Kasaragodu
Updated On : 17 Aug 2013, 12:09 pm

ಕ.ಪ್ರ.ವಾರ್ತೆ, ಪುತ್ತೂರು, ಆ.16
ಜಿಲ್ಲೆಯ ಅಡಕೆ ಬೆಳೆಗಾರರು ಈ ಬಾರಿಯ ಅತಿವೃಷ್ಟಿಯಿಂದ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಅಡಕೆ ಬೆಳೆಗೆ ವಿಶೇಷ ಪ್ಯಾಕೇಜ್ ಹಾಗೂ ಅಡಕೆ ಕೊಳೆರೋಗ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಆ.19ರಂದು ಬೃಹತ್ ಹಕ್ತೊತ್ತಾಯ ಚಳವಳಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಸಿ. ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಕ್ಕೊತ್ತಾಯ ಚಳವಳಿಯಲ್ಲಿ ಪುತ್ತೂರು ಅರುಣಾ ಚಿತ್ರಮಂದಿರದ ಬಳಿಯಿಂದ ಅಂದು ಬೆಳಗ್ಗೆ 10 ಗಂಟೆಗೆ ಜಾಥಾ ಆರಂಭಿಸಲಾಗುವುದು.
ಬಳಿಕ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ಬಂದು ಆಯುಕ್ತರಿಗೆ ಅಹವಾಲು ಸಲ್ಲಿಸಲಾಗುವುದು ಎಂದು ಹೇಳಿದರು.
 ರೈತ ಸಮುದಾಯ ಅಡಕೆ ಕೊಳೆರೋಗದಿಂದ ಹಾಳಾದ ಅಡಕೆ ರಾಶಿಯನ್ನು ಎಸಿ ಕಚೇರಿ ಮುಂದೆ ಸುರಿದು ಪ್ರತಿಭಟಿಸಲಾಗುವುದು. ಹಿಂದಿನ ಸರ್ಕಾರ ಕೇವಲ ಭರವಸೆಗಳ ಮೂಲಕ ರೈತರನ್ನು ವಂಚಿಸಿದೆ ಎಂದು ಆರೋಪಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಅಡಕೆ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಎಕರೆಗೆ ಒಂದು 1 ಲಕ್ಷ ಪರಿಹಾರ ನೀಡಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಹಕ್ಕೊತ್ತಾಯ ಚಳವಳಿ ನಡೆಯಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement