ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

'ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಚಿಂತನೆ'

Rashmi Kasaragodu
Updated On : 17 Aug 2013, 1:31 am

ಮಂಗಳೂರು: ಖಾಸಗಿ ಮಾರುಕಟ್ಟೆಗೆ ಆಸ್ಪದ ನೀಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಚಿಂತಿಸುತ್ತಿದೆ ಎಂದು ರಾಜ್ಯ ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಭರತ್‌ಲಾಲ್ ಮೀನಾ ಹೇಳಿದರು.
 ದ.ಕ. ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ 'ಕೃಷಿ ಕ್ಷೇತ್ರ-ಮಾದರಿ ಗ್ರಾಮ' ಸಂವಾದದಲ್ಲಿ ಮಾತನಾಡಿ, ಸ್ಥಳೀಯ ಮಾರುಕಟ್ಟೆ, ಉಪಮಾರುಕಟ್ಟೆ ಹಾಗೂ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಲಾಗುವುದು. ಕೃಷಿ ಬೆಳೆ ಆಯೋಗ ರಚಿಸುವ ಬಗ್ಗೆ ಸರ್ಕಾರ ಬಜೆಟ್‌ನಲ್ಲಿ ಪ್ರಕಟಿಸಿದೆ. ರೈತರು ತಮಗೆ ಬೇಕಾದ ಬೆಳೆಯನ್ನು ಸಮರ್ಥವಾಗಿ ಬೆಳೆಗೆ ಸರಿಯಾದ ಮಾರುಕಟ್ಟೆ ಕಲ್ಪಿಸಬೇಕು. ಕಂಪನಿ ಮಾದರಿಯಲ್ಲಿ ಸಂಘಟಿತರಾದರೆ ಉತ್ಪನ್ನಕ್ಕೆ ಉತ್ತಮ ಧಾರಣೆ ಸಿಗಬಹುದು. ಈ ಪ್ರಯೋಗ ಅವಿಭಜಿತ ದಕ್ಷಿಣ ಜಿಲ್ಲೆಯಿಂದಲೇ ಪ್ರಾರಂಭವಾಗಲಿ ಎಂದರು. ಗ್ರಾಮೀಣ ಪ್ರದೇಶದಲ್ಲಿ ರೈತರು ಗೋದಾಮು ನಿರ್ಮಿಸಿದರೆ ಸಾಲದ ಬಡ್ಡಿ ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement