ನಿಡ್ಡೋಡಿ ಸ್ಥಾವರ ನಿರ್ಮಾಣ ಬೇಡ
ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದ ನಿಯೋಗವೊಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಎಂ.ವೀರಪ್ಪ ಮೊಯ್ಲಿ ಹಾಗೂ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿಯಾಗಿ ಮೂಡುಬಿದಿರೆಯ ನಿಡ್ಡೋಡಿಯಲ್ಲಿ ಕೇಂದ್ರ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರನ್ನು ಕೈ ಬಿಡುವಂತೆ ಆಗ್ರಹಿಸಿದರು. ಮಾತೃಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಲ್ಪೋನ್ಜ್ ಡಿ'ಸೋಜಾ, ಉಪಾಧ್ಯಕ್ಷ ಭಾಸ್ಕರ್ ದೇವಸ್ಯ, ಕಾರ್ಯದರ್ಶಿ ಪೂವಪ್ಪ ಗೌಡ, ಜಗನ್ನಾಥ್ ಶೆಟ್ಟಿ ಮತ್ತಿತರರಿದ್ದರು.