ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನವೆಂಬರ್‌ನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ: ರಮಾನಾಥ ರೈ

Mainashree
Updated On : 26 Aug 2013, 10:30 am

ಮಂಗಳೂರು: ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ದ.ಕ. ಸಾರ್ವಜನಿಕ ಶಿಕ್ಷಣ ಇಲಾಖೆಗೆ ಈ ಬಾರಿ ವಿಭಾಗ ಮಟ್ಟದ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಸಲು ಅವಕಾಶ ಲಭಿಸಿದ್ದು, ಕ್ರೀಡಾಕೂಟವನ್ನು 2013 ನವೆಂಬರ್‌ನಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ರೀಡಾಕೂಟದಲ್ಲಿ 17 ವರ್ಷದೊಳಗಿನ ಪ್ರೌಢಶಾಲೆ ಬಾಲಕ-ಬಾಲಕಿಯರಿಗೆ ವಿಭಾಗಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟಗಳು, ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟ ನಡೆಸಲಾಗುವುದು. ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯ, ಎರಡನೇ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿ ಹಾಗೂ ಮೂರನೇ ವಾರ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದರು. ಕ್ರೀಡಾಕೂಟಕ್ಕೆ ಆಗಮಿಸುವ ಹೊರ ಜಿಲ್ಲೆ ಪ್ರತಿನಿಧಿಗಳಿಗೆ ವಸತಿ, ಊಟ, ಆರೋಗ್ಯ, ಶುಚಿತ್ವ  ಮುಂತಾದ ವ್ಯವಸ್ಥೆಗಳನ್ನು ಉತ್ತಮವಾಗಿ ನಿರ್ವಹಿಸಲು ವಿವಿಧ ಸಮಿತಿಗಳನ್ನು ರಚಿಸುವಂತೆ ಸಚಿವರು ಸಭೆಯಲ್ಲಿ ಸೂಚಿಸಿದರು. ಜಿಲ್ಲೆಯ ಎಂಆರ್‌ಪಿಎಲ್, ಎಸ್‌ಇಜೆಡ್, ಎಂಸಿಎಫ್, ಇತರೆ ಖಾಸಗಿ ಸಂಸ್ಥೆಗಳ ನೆರವನ್ನು ಪಡೆದು ಕ್ರೀಡಾಕೂಟ ಪಂದ್ಯಾಟ ಯಶಸ್ವಿಗೊಳಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎನ್.ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಸೆಸ್ ಜಯಶೇಖರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೇಶವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement