ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್: ಎಸ್‌ಡಿಎಂ ವಿದ್ಯಾರ್ಥಿಗಳ ಸಾಧನೆ
ಬೆಳ್ತಂಗಡಿ: ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಕಿರಿಯರ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಅಂತಿಮ ಕಲಾ ಪದವಿಯ ಹರ್ಷ ಡಿ.ಆರ್. 77 ಕೆ.ಜಿ ವಿಭಾಗದಲ್ಲಿ 107 ಸ್ಕ್ವಾಚ್ 142 ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ಹಿಂದಿನ ದಾಖಲೆಗಳನ್ನು ಮುರಿದು ಹೊಸ ದಾಖಲೆ ನಿರ್ಮಿಸುವುದರ ಜೊತೆಗೆ ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಆಗಿ ಹೊರಹೊಮ್ಮಿದ್ದಾರೆ. 69 ಕೆ.ಜಿ ವಿಭಾಗದಲ್ಲಿ ಪ್ರಥಮ ಎಂಕಾಂನ ಸಂತೋಷ್ ಕುಮಾರ್ 125 ಕ್ಲೀನ್ ಮತ್ತು 2 ಜರ್ಕ್ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
62 ಕೆ.ಜಿ ವಿಭಾಗದಲ್ಲಿ ಅಂತಿಮ ಕಲಾ ಪದವಿಯ ವಿದ್ಯಾರ್ಥಿ ಮೊಹಮ್ಮದ್ ದಿಶಾನ್ ಪ್ರಥಮ ಸ್ಥಾನ ಗಳಿಸಿ ಚಿನ್ನ ಗೆದ್ದುಕೊಂಡರೆ 105 ಕೆ.ಜಿ ವಿಭಾಗದಲ್ಲಿ ಅಂತಿಮ ಬಿಎಸ್ಸಿಯ ಪ್ರೀತಮ್ ಶಿರ್ಲಾಲ್ ಹಾಗೂ 105 ಕೆಜಿ ವಿಭಾಗದಲ್ಲಿ ಅಂತಿಮ ಬಿಕಾಂನ ಪೃಥ್ವಿರಾಜ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ವೇಟ್ ಲಿಫ್ಟಿಂಗ್ ತರಬೇತುದಾರ ರಾಜೇಂದ್ರ ಪ್ರಸಾದ್ ಅವರನ್ನು ಈ ವೇಳೆ ಸನ್ಮಾನಿಸಲಾಯಿತು.