ಮಲಬಾರಿ ಬೆದರಿಕೆ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಗಳೂರು: ಹಿಂದೂ ಮುಖಂಡರ ವಿರುದ್ಧ ಅವಾಚ್ಯವಾಗಿ ಮಾತನಾಡಿ ಬೆದರಿಕೆ ಹಾಕಿದ ಪಾತಕಿ ರಶೀದ್ ಮಲಬಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭೂಗತ ಚಟುವಟಿಕೆಯಲ್ಲಿ ಆರೋಪ ಸಾಬೀತಾಗಿ ಗುರುವಾರ ಮಂಗಳೂರು ನ್ಯಾಯಾಲಯದಲ್ಲಿ ಶಿಕ್ಷೆ ಪ್ರಕಟವಾದ ಸಂದರ್ಭ ಆತ ಹಿಂದೂ ಮುಖಂಡರ ಹಾಗೂ ಪೊಲೀಸ್ ಅಧಿಕಾರಿ ವಿರುದ್ಧ ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆ ನೀಡಲು ಅವಕಾಶ ನೀಡಿದ್ದು, ಇದನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವೈಫಲ್ಯವಾಗಿದೆ. ಹಿಂದೂ ಮುಖಂಡರ ವಿರುದ್ಧ ಮಾತನಾಡಿದರೆ ಅದಕ್ಕೆ ತಕ್ಕ ಉತ್ತರವನ್ನು ಕಾನೂನಾತ್ಮಕ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.