ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ತನಿಖೆ ವಿಳಂಬ: ನಾಳೆ ಬೃಹತ್ ಪ್ರತಿಭಟನೆ

Lingaraj Badiger
Updated On : 9 Dec 2013, 10:54 am

ಬಂಟ್ವಾಳ: ಹಲವು ಹೋರಾಟ, ಪ್ರತಿಭಟನೆಗಳ ಫಲವಾಗಿ ಸೌಜನ್ಯಾ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದರೂ ಇನ್ನೂ ಕಾರ್ಯಾಚರಣೆ ಆರಂಭಗೊಳಿಸದೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ 9ರಂದು ಬೆಳಗ್ಗೆ ಬಿ.ಸಿ. ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಮುಖ್ಯಸ್ಥ ಸಂತೋಷ್ ಪಾಣೆಮಂಗಳೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಾಂತ ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪ್ರತಿಭಟಿಸುವ ಹಕ್ಕನ್ನು ಮೊಟಕುಗೊಳಿಸುವ ಉದ್ದೇಶದಿಂದ ಸರ್ಕಾರ ಸಿಬಿಐಗೆ ಒಪ್ಪಿಸಿದೆ ಎಂದು ಹೇಳಿ ನಾಟಕವಾಡಿದೆ. ಒಪ್ಪಿಸಿದ್ದು ನಿಜವಾಗಿದ್ದಲ್ಲಿ ತಿಂಗಳು ಕಳೆದರೂ ಯಾಕೆ ಕಾರ್ಯಾಚರಣೆ ಆರಂಭಗೊಂಡಿಲ್ಲ ಎಂದು ಪ್ರಶ್ನಿಸಿದರು, ಸುಪ್ರೀಂ ಕೋರ್ಟ್ ಸುಪರ್ದಿಯಲ್ಲಿ ಸಿಬಿಐ ತನಿಖೆ ಆರಂಭವಾಗಬೇಕು ಮತ್ತು ಇದುವರೆಗೆ ಧರ್ಮಸ್ಥಳ ಪರಿಸರದಲ್ಲಿ ನಡೆದ 400 ಕ್ಕೂ ಹೆಚ್ಚು ಅಸಹಜ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಗೆ ಇಡೀ ರಾಜ್ಯದ ಯುವ ಜನತೆಯಿಂದ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆ ಕೈಕಂಬ ದ್ವಾರದ ಬಳಿಯಿಂದ ಪ್ರತಿಭಟನಾ ಜಾಥಾ ನಡೆಯಲಿದೆ. ಕೇಮಾರು ಶ್ರೀ, ಮಹೇಶ್ ಶೆಟ್ಟಿ ತಿಮರೋಡಿ, ಡಾ. ಅರಳೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement