ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ನಾಳೆ ವಿಶ್ವ ಮಾನವ ಹಕ್ಕು ದಿನಾಚರಣೆ

Lingaraj Badiger
Updated On : 9 Dec 2013, 10:54 am

ಪುತ್ತೂರು: ಪುತ್ತೂರು ಜ್ಯೂನಿಯರ್ ಕಾಲೇಜಿನ ಶಿವಸದನ ಸಭಾ ಭವನದಲ್ಲಿ 10 ರಂದು ವಿಶ್ವಮಾನವ ಹಕ್ಕು ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು  ದೆಹಲಿ ಮಾನವ ಹಕ್ಕು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಪುತ್ತೂರು ಘಟಕದ ಅಧ್ಯಕ್ಷ ತಾಹಿರ್ ಹುಸೈನ್ ತಿಳಿಸಿದ್ದಾರೆ.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಉಪವಿಭಾಗಾಧಿಕಾರಿ ಎಚ್. ಕೃಷ್ಣಮೂರ್ತಿ, ತಹಸೀಲ್ದಾರ್ ಎಂ.ಟಿ. ಕುಳ್ಳೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ .ಜಿ.ಎಸ್, ನಗರ ಪೊಲೀಸ್ ನಿರೀಕ್ಷಕ ಮಂಜಯ್ಯ, ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯರಾಮ ರೈ, ತಾ.ಪಂ. ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾನವ ಹಕ್ಕು ಸಂಘಟನೆಯ ಸದಸ್ಯ ನ್ಯಾಯವಾದಿ ನೂರುದ್ದೀನ್ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಚಂದನ್ ರೈ, ಕಿರಣ್ ಶೆಟ್ಟಿ, ಸಂದೀಪ್ ರೈ ಮತ್ತು ಫೈಝಲ್ ಮಹಮ್ಮದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement