ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

15ರಂದು 'ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ' ಮುಹೂರ್ತ

Mainashree
Updated On : 11 Dec 2013, 10:14 am

ಮೂಲ್ಕಿ: ತುಂಗಭದ್ರ ಫಿಲ್ಸ್ ಅವರ ಚ್ಯಾಲೆಂಜಿಂಗ್ ಸ್ಟಾರ್ ದರ್ಶನ್ ಅರ್ಪಿಸುವ ರಾಜ್‌ಶೇಖರ್ ಕೋಟ್ಯಾನ್ ನಿರ್ಮಾಣ- ನಿರ್ದೇಶನದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ತುಳು ಚಲನಚಿತ್ರದ ಮುಹೂರ್ತ ಸಮಾರಂಭ 15ರಂದು ಬೆಳಗ್ಗೆ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹೊರಾಂಗಣದಲ್ಲಿ ಜರಗಲಿದೆ. ರಾಜ್‌ಶೇಖರ್ ಕೋಟ್ಯಾನ್ ನಿರ್ದೇಶನದ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಚಲನಚಿತ್ರದ ಚಿತ್ರಕಥೆಯನ್ನು ಮೂಲ್ಕಿ ಚಂದ್ರಶೇಖರ ಸುವರ್ಣ ರಚಿಸಿದ್ದು, ಪಿ.ಕೆ.ಎಚ್. ದಾಸ್ ಕ್ಯಾಮರಾ, ಪ್ರವೀಣ್ ಗೋಡ್ಕಿಂಡಿ ಸಂಗೀತ, ಸುಧಾಕರ ಬನ್ನಂಜೆ ಸಂಭಾಷಣೆ, ದೇವರಾಜ್ ಪಾಲನ್‌ರ ಸಹ ನಿರ್ದೇಶನದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಸಂಸದ ಜಯಪ್ರಕಾಶ್ ಹೆಗ್ಡೆ ಕೆಮರಾ ಚಾಲನೆ ನೀಡಲಿದ್ದಾರೆ. ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಶಿವಗಿರಿ ಮಠದ ಸತ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನಟ ದರ್ಶನ್ ಕ್ಲಾಪ್ ಮಾಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಸಚಿವರಾದ ವಿನಯ ಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್, ಬೈಂದೂರು ಶಾಸಕ ಗೋಪಾಲ ಭಂಡಾರಿ, ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಹಾಗೂ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಮತ್ತಿತರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement