ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವ ಮೈಲಿ ಪತ್ರ

Rashmi Kasaragodu
Updated On : 13 Dec 2013, 11:48 am

ಮಂಗಳೂರು: ದ.ಕ. ಜಿಲ್ಲೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಪ್ರಯುಕ್ತ ಕೇಂದ್ರ ಪೆಟ್ರೋಲಿಯಂ ಸಚಿವ ಡಾ.ಎಂ. ವೀರಪ್ಪ ಮೈಲಿ ಸಂಬಂಧಪಟ್ಟ ಕೇಂದ್ರ ಹಾಗೂ ರಾಜ್ಯದ ಸಚಿವರಿಗೆ ಪತ್ರ ಬರೆದಿದ್ದಾರೆ.  ಮಂಗಳೂರು -ಶಿವಮೊಗ್ಗ ರಾ.ಹೆ. 13 ರಲ್ಲಿ ಕಾರ್ಕಳದಿಂದ ಮಂಗಳೂರಿನ ನಂತೂರುವರೆಗೆ 41 ಕಿ.ಮೀ.ರಸ್ತೆ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ವೀರಪ್ಪ ಮೈಲಿ ಕೇಂದ್ರ ಹೆದ್ದಾರಿ ಖಾತೆ ಸಚಿವ ಅಸ್ಕರ್ ಫೆರ್ನಾಂಡಿಸ್‌ರನ್ನು ಕೋರಿದ್ದಾರೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ 13ರ ಅಭಿವೃದ್ಧಿ ಸಂಬಂಧಿಸಿದ ಕಾರ್ಯ ಸಾಧ್ಯತಾ ವರದಿ ಸಲ್ಲಿಸಿದ್ದು, ಪ್ಯಾಕೇಜ್ 3ರಲ್ಲಿ ಇದನ್ನು ಕೈಗೊಳ್ಳಬಹುದೆಂದು ತಿಳಿಸಲಾಗಿದೆ. ಆದ್ದರಿಂದ ಇಪಿಸಿ ಮಾದರಿಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದು. ಪುಣೆ -ಮಂಗಳೂರು ನಡುವೆ ವಿಮಾನ ಹಾರಾಟ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ವಿಮಾನಯಾನ ಸಚಿವ ಅಜಿತ್ ಸಿಂಗ್ ಅವರನ್ನು ವಿಚಾರಿಸಿದ್ದಾರೆ. ಪ್ರತಿಕ್ರಿಯಿಸಿದ ಸಚಿವರು ಈಗಾಗಲೇ ಪುಣೆ ಮತ್ತು ಕೊಚ್ಚಿನ್ ಮಧ್ಯೆ ವಿಮಾನ ಹಾರಾಟ ನಡೆಯುತ್ತಿದೆ. ಇದೇ ವಿಮಾನಕ್ಕೆ ಮಂಗಳೂರಿನಲ್ಲಿ ನಿಲುಗಡೆ ನೀಡಿದರೆ ಅಥವಾ ಮಂಗಳೂರು ಪುಣೆ ಮಧ್ಯೆ ನೇರ ಹಾರಾಟ ನಡೆಸಿದರೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪುತ್ತೂರು ತಾಲೂಕಿನ ಕಡಬದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಸ್ಥಾಪಿಸುವಂತೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಗೆ ಪತ್ರ ಬರೆದಿದ್ದಾರೆ.  ಹಿಂದುಳಿದ ಪ್ರದೇಶ ಕಡಬದಲ್ಲಿ ಪಾಲಿಟೆಕ್ನಿಕ್ ಮತ್ತು ಐ.ಟಿ.ಐ ಸ್ಥಾಪನೆ ಅಗತ್ಯವಾಗಿದ್ದು, ಈ ಕುರಿತು ಕಾರ್ಮಿಕ ಸಚಿವ ಟಿ. ಪರಮೇಶ್ವರ ನಾಯಕ್ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಮಾವೇಲಿ ಎಕ್ಸ್‌ಪ್ರೆಸ್ ರೈಲಿಗೆ ಮಂಜೇಶ್ವರ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವ ಕುರಿತು ಪರಿಶೀಲನೆ ನಡೆಸುವಂತೆ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement