ಸಿಇಟಿ ಕಾಯ್ದೆ; ಇಂದು ಅಭಾವಿಪ ಪ್ರತಿಭಟನೆ
ಮಂಗಳೂರು: ವೃತ್ತಿ ಶಿಕ್ಷಣ ಪ್ರವೇಶ 2006ರ ಕಾಯ್ದೆ ಅನುಷ್ಠಾನಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿರೋಧ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಈ ಕಾಯ್ದೆ ಅನುಷ್ಠಾನಿಸುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕು ಮೊಟಕುಗೊಳಿಸುವ ಸರ್ಕಾರದ ಹುನ್ನಾರ ಇದಾಗಲಿದೆ.
ಈ ಕಾಯ್ದೆ ಪ್ರಕಾರ 210 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 21 ಮತ್ತು 32 ವೈದ್ಯಕೀಯ ಕಾಲೇಜುಗಳಲ್ಲಿ 10 ಕಾಲೇಜುಗಳಲ್ಲಿರ ಸುಮಾರು 5 ಸಾವಿರ ಸೀಟುಗಳಿಗೆ ಮಾತ್ರ ಸಿಇಟಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಉಳಿದ ಸುಮಾರು 75 ಸಾವಿರ ಸೀಟುಗಳಿಗೆ ಕಾಮೆಡ್-ಕೆ ಪ್ರವೇಶ ಪರೀಕ್ಷೆ ನಡೆಸುವುದರಿಂದ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ.
ಯಾಕೆಂದರೆ ಕಾಮೆಡ್-ಕೆ ನಡೆಸಿದ ಪ್ರವೇಶ ಅವ್ಯವಹಾರಗಳೇ ಸಾಕ್ಷಿ ಎಂದು ರಾಷ್ಟ್ರೀಯ ಕಾರ್ಯದರ್ಶಿ ವಿನಯ ಬಿದರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.