ಸಿಇಟಿ ಸಮಾನ ಶುಲ್ಕ ನಿಗದಿಗೆ ಆಗ್ರಹ
ಮಂಗಳೂರು: ಸಿಇಟಿ ಕಾಯ್ದೆ ಪ್ರಕಾರ ಸರ್ಕಾರಿ ಮತ್ತು ಖಾಸಗಿ ವೃತ್ತಿಪರ ಕಾಲೇಜುಗಳಲ್ಲಿ ನೀಡುತ್ತಿದ್ದ ಮೆಡಿಕಲ್ ಎಂಜಿನಿಯರಿಂಗ್ ಸೀಟುಗಳನ್ನು ಹಿಂದಿನ ಸಿಇಟಿ ಮಾದರಿಯಲ್ಲಿ ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿ' ಸೋಜ ವಿನಂತಿ ಮಾಡಿದ್ದಾರೆ.
ಹಿಂದಿನ ಸಿಇಟಿ ದೇಶದಲ್ಲಿ ಅತ್ಯುತ್ತಮ ಮಾದರಿಯಾಗಿದ್ದು, ಉನ್ನತ ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯಕ್ಕೆ ಸಾಧ್ಯವಾಗುತ್ತಿತ್ತು. ವಿಪರೀತ ಶುಲ್ಕ ನಿಗದಿಪಡಿಸುವ ಖಾಸಗಿ ಕಾಲೇಜುಗಳಿಗೆ ಕಡಿವಾಣ ಹಾಕಿ ಸಮಾನ ಶುಲ್ಕ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು.
ಯಾವುದೇ ಕಾರಣಕ್ಕೂ 2006ರ ಕಾಯ್ದೆಯನ್ನು ಜಾರಿಗೆ ತರಬಾರದು. ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಶೇ.50 ಸೀಟುಗಳನ್ನು ಸರ್ಕಾರ ನಿರ್ದೇಶನದಲ್ಲಿ ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.