ಅಡಕೆ ನಿಷೇಧ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಂಟ್ವಾಳ: ರೈತರ ಹಿತ ಕಾಯಬೇಕಾಗಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅವರ ಮೇಲೆಯೇ ಸವಾರಿ ಮಾಡಲು ಹೊರಟಿರುವುದು ಖಂಡನೀಯ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಅಡಕೆ ಬೆಳೆ ನಿಷೇಧಿಸಿರುವ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಅಫಿದವಿತ್ ಸಲ್ಲಿಸಿರುವುದನ್ನು ಖಂಡಿಸಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ವತಿಯಿಂದ ಗುರುವಾರ ತಾಲೂಕು ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಟೀಕೆಗಳ ಸುರಿಮಳೆಯನ್ನೇ ಹರಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್ಸಿಂಹ ನಾಯಕ್ ಮಾತನಾಡಿದರು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಪ್ರಮುಖರಾದ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು, ತುಂಗಪ್ಪ ಬಂಗೇರಾ, ಜಿ. ಆನಂದ, ದೇವದಾಸ್ ಶೆಟ್ಟಿ, ಕಿಶೋರ್ ರೈ, ನೇಮಿರಾಜ ರೈ, ರವೀಂದ್ರ ಕಂಬಳಿ, ಲಲಿತಾ ಶಿವಪ್ಪ ನಾಯ್ಕ್ ಇದ್ದರು.ದೇವಪ್ಪ ಪೂಜಾರಿ ನಿರೂಪಿಸಿದರು. ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.