ಇಂದು 'ಕ್ಯಾನ್ ಪ್ರಾಸ್ಟ್'
ಮಂಗಳೂರು: ಕೆನರಾ ಪ್ಲಾಸ್ಟಿಕ್ ಮ್ಯಾನುಫ್ಯಾಕ್ಚರಿಂಗ್ ಅಂಡ್ ಟ್ರೇಡರ್ಸ್ ಅಸೋಸಿಯೇಶನ್ ವತಿಯಿಂದ ಡಿ. 23 ರಂದು ಒಶನ್ ಪರ್ಲ್ ಹೊಟೇಲ್ನಲ್ಲಿ 'ಕ್ಯಾನ್ ಪ್ರಾಸ್ಟ್-2013' ರಾಜ್ಯಮಟ್ಟದ ತಾಂತ್ರಿಕ ವಿಚಾರಗೋಷ್ಠಿ ನಡೆಯಲಿದೆ.
ಕಾರ್ಯಕ್ರಮವನ್ನು ಬೆಳಗ್ಗೆ 9.30ಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಶಾನಾಡಿ, ಕೆಸಿಸಿಐ ಅಧ್ಯಕ್ಷ ಮೊಹಮ್ಮದ್ ಅಮೀನ್ ಪಾಲ್ಗೊಳ್ಳುವರು ಎಂದು ಅಸೋಸಿಯೇಶನ್ ಅಧ್ಯಕ್ಷ ಬಿ.ಎ. ನಝೀರ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ಲಾಸ್ಟಿಕ್ ಮರುಉತ್ಪಾದನೆಯಿಂದ ವ್ಯವಹಾರವನ್ನು ಅಭಿವೃದ್ಧಿಪಡಿಸುವ ಬಗೆಯನ್ನು ವಿಚಾರಗೋಷ್ಠಿಯಲ್ಲಿ ಚರ್ಚಿಸಲಾಗುವುದು.
ಗೋಷ್ಠಿಯಲ್ಲಿ ಕೆಎಸ್ಪಿಸಿಬಿ ಮಾಜಿ ಅಧ್ಯಕ್ಷ ಡಾ.ಎಚ್.ಸಿ. ಶರತ್ಚಂದ್ರ, ಮುಂಬೈನ ಟಿ.ಆರ್. ರಾವ್, ಉದ್ಯಮಿ ರಸೂಲ್ ಖಾನ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು ಎಂದು ಹೇಳಿದರು.