ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ತುಳುವರೆಲ್ಲ ಒಂದಾಗಿ ಸಂಸ್ಕೃತಿ ಉಳಿಸಬೇಕು: ಒಡಿಯೂರು ಶ್ರೀ

Lingaraj Badiger
Updated On : 31 Dec 2013, 12:12 pm

ವಿಟ್ಲ: ತುಳುವರು ವಿಶಾಲ ಹೃದಯಿಗಳು. ತುಳುವರೆಲ್ಲರೂ ಒಗ್ಗಟ್ಟಾಗಿ ಇಲ್ಲಿನ ಸಂಸ್ಕೃತಿಯನ್ನು ಉಳಿಸುವ ಪ್ರಯತ್ನ ಮಾಡಬೇಕು. ಪಾಶ್ಚಾತ್ಯ ಭಾಷೆಯಿರಲಿ, ಆದರೆ ಪಾಶ್ಚಾತ್ಯ ಸಂಸ್ಕೃತಿ ಬೇಡ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ತುಳು ಕೂಟೊ, ಬೊಳ್ಳಿಪರ್ಬ ಕೂಟ, ಕರೋಪಾಡಿ- ಕನ್ಯಾನ ಗ್ರಾಮ ಸಮಿತಿ ಸಹಯೋಗದಲ್ಲಿ ಒಡಿಯೂರು ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಇತ್ತೀಚೆಗೆ ತುಳು ನಡಕೆದೈಸಿರೊ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಕರಾವಳಿಯ ಶಾಲೆಗಳಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ತುಳು ಭಾಷೆಗೂ ಮಾನ್ಯತೆ ಕೊಡಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.
ಶ್ರೀಗುರುದೇವ ಸೇವಾ ಬಳಗ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಗಳು ಸಹಕರಿಸಿದ್ದವು.
ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಿದರು. ಸಾಧ್ವಿ ಶ್ರೀ ಮಾತಾನಂದಮಯಿ, ಕನ್ಯಾನ ಗ್ರಾಪಂ ಅಧ್ಯಕ್ಷ ಕೆ.ಪಿ. ರಘುರಾಮ ಶೆಟ್ಟಿ, ಬಸ್ರೂರು ಶ್ರೀ ಶಾರದಾ ಕಾಲೇಜಿನ ಪ್ರಾಂಶುಪಾಲೆ ಚಂದ್ರಪ್ರಭಾ ಹೆಗ್ಡೆ, ಮೈಸೂರಿನ ನ್ಯಾಯವಾದಿ ಒ. ಶ್ಯಾಮ ಭಟ್ ಮಾತನಾಡಿದರು. ಒಡಿಯೂರ್ದ ತುಳು ಕೂಟದ ಅಧ್ಯಕ್ಷ ಮಲಾರು ಜಯರಾಮ ರೈ, ಕನ್ಯಾನ ಗ್ರಾಮ ಬೊಳ್ಳಿಪರ್ಬ ಸಮಿತಿ ಅಧ್ಯಕ್ಷ ರಘುನಾಥ ರೈ, ಕೇಂದ್ರ ಸಮಿತಿ ಕಾರ್ಯದರ್ಶಿ ಸುಬ್ರಹ್ಮಣ್ಯ ಒಡಿಯೂರು ಇದ್ದರು.
ಕರೋಪಾಡಿ ಗ್ರಾಮ ಬೊಳ್ಳಿಪರ್ಬ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಮಾತೇಶ್ ಭಂಡಾರಿ ವಂದಿಸಿದರು. ರೇಣುಕಾ ಎಸ್. ರೈ ಆಶಯಗೀತೆ ಹಾಡಿದರು. ಶಿಕ್ಷಕ ಜಯಪ್ರಕಾಶ್ ಶೆಟ್ಟಿ ನಿರೂಪಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement