ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Mainashree
Updated On : 3 Feb 2013, 11:45 am

ಬೆಳ್ತಂಗಡಿ: ಉಜಿರೆ ಶ್ರೀರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಯ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ ವತಿಯಿಂದ ಶನಿವಾರ ಪುರುಷರ ರಾಷ್ಟ್ರ ಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ಉದ್ಘಾಟಿಸಿದರು.
ಕರ್ನಾಟಕ ವಾಲಿಬಾಲ್ ತಂಡದ ಕ್ಯಾಪ್ಟನ್ ಗಣೇಶ್ ರೈ ಅವರು ಕ್ರೀಡಾಂಗಣ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ತಾಲೂಕು ಅಧ್ಯಕ್ಷ ಪುಷ್ಪರಾಜ ಶೆಟ್ಟಿ ವಹಿಸಿದ್ದರು.
ಶಾಸಕ ಕೆ.ವಸಂತ ಬಂಗೇರ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಬಿ.ಯಶೋವರ್ಮ, ಜಯ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಜಗದೀಶ್ ಪಿ.ಎನ್. ವೇದಿಕೆಯಲ್ಲಿದ್ದರು.
ಬೆಳ್ತಂಗಡಿ ನಗರ ಪಂಚಾಯಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಉದ್ಯಮಿ ಎನ್.ವಿ. ಗೋಪಾಲ ಶೆಟ್ಟಿ, ಎಪಿಎಂಸಿ ಅಧಕ್ಷ್ಯ ಭರತ್ ಕುಮಾರ್, ಜಿ.ಪಂ ಸದಸ್ಯ ಕೆ.ಶೈಲೇಶ್ ಕುಮಾರ್, ತಾ.ಪಂ ಅಧ್ಯಕ್ಷ ಕೇಶವ ಎಂ., ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ತಂತ್ರಿ ಮತ್ತಿತರರು ಇದ್ದರು.
ಈ ಸಂದರ್ಭ ಅಂತಾರಾಷ್ಟ್ರೀಯ ಫುಟ್ಬಾಲ್ ಕ್ರೀಡಾಪಟು ಚಿನ್ಮಯಿ ಎಸ್. ಗೌಡ, ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಅಶ್ವಥ್ ರೈ ಮತ್ತು ಗ್ಲೇನ್ ಮೋನಿಸ್ ಅವರನ್ನು ಸನ್ಮಾನಿಸಲಾಯಿತು.
ಸಂಘಟನೆಯ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಸ್ವಾಗತಿಸಿದರು. ಸುರೇಶ್ ಕುಮಾರ್ ಆರ್.ಎನ್. ವಂದಿಸಿದರು. ಕಿಶೋರ್ ಅರಸಿನಮಕ್ಕಿ ಮತ್ತು ಅಶ್ರಫ್ ಆಲಿ ಕುಂಞ ನಿರ್ವಹಿಸಿದರು.
ಇದಕ್ಕೂ ಮೊದಲು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಕ್ರೀಡಾಂಗಣವರೆಗೆ ಮೆರವಣಿಗೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement