ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮಂಗಳೂರು: ಇಂದು ಕ್ಯಾನ್ಸರ್ ದಿನಾಚರಣೆ

Lingaraj Badiger
Updated On : 4 Feb 2013, 12:52 pm

ಮಂಗಳೂರು: ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಫೆ. 4 ರಂದು ಜಾಗತಿಕ ಕ್ಯಾನ್ಸರ್ ದಿನಾಚರಣೆ ನಡೆಯಲಿದೆ. ಇದಕ್ಕಾಗಿ ಕೆಎಂಸಿ ಆವರಣದಲ್ಲಿ ಕ್ಯಾನ್ಸರ್ ಮರ ನೆಡಲಾಗಿದೆ. ಕ್ಯಾನ್ಸರ್ ಮಾಹಿತಿ ಅಭಿಯಾನದ ಪ್ರಯುಕ್ತ ರೋಗಿಗಳಿಗೆ, ಉದ್ಯೋಗಿಗಳಿಗೆ, ಗ್ರಾಹಕರಿಗೆ, ಜನಸಾಮಾನ್ಯರಿಗೆ ಮಾಹಿತಿ ನೀಡಲಾಗುತ್ತದೆ. ಫೆ. 9ರ ತನಕ ವಾರಪೂರ್ತಿ ರಿಯಾಯಿತಿ ದರದಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ಪ್ಯಾಕೇಜ್‌ನ್ನು ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9448254700ನ್ನು ಸಂಪರ್ಕಿಸಬಹುದು ಎಂದು ವೈದ್ಯಾಧಿಕಾರಿ ಡಾ. ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಲ್ಕಿ: ಇಂದು, ನಾಳೆ ಉದ್ಯಮಶೀಲತಾ ಪ್ರೇರಣಾ ಶಿಬಿರ
ಮೂಲ್ಕಿ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಉದ್ಯಮಶೀಲತಾ ಅಭಿವೃದ್ಧಿ ಘಟಕ ಮತ್ತು ಸ್ಥೆಫ್, ಹೈದರಾಬಾದ್‌ನ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ ಹಾಗೂ ಮೂಲ್ಕಿಯ ವಿಜಯ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿಯ ವಿಜಯ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 4 ಮತ್ತು 5ರಂದು ಉದ್ಯಮಶೀಲತಾ ಪ್ರೇರಣಾ ಶಿಬಿರ ಜರಗಲಿದೆ.
ಮಂಗಳೂರಿನಲ್ಲಿ ಇಂದು ಅತಿಥಿ ಉಪನ್ಯಾಸಕರ ಪ್ರತಿಭಟನೆ
ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆ ಖಂಡಿಸಿ 4ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಅತಿಥಿ ಉಪನ್ಯಾಸಕರ ಸಂಘದಿಂದ ಪ್ರತಿಭಟನೆ ನಡೆಯಲಿದೆ. ಅಂದು ಬೆಳಗ್ಗೆ ಮಂಗಳೂರಿನ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಡಿಸಿ ಕಚೇರಿ ಎದುರು ಸಂಜೆವರೆಗೆ ಧರಣಿ ಕೂರಲಾಗುವುದು ಎಂದು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement