ಪುತ್ತೂರು ಜೆಡಿಎಸ್ ಅಭ್ಯರ್ಥಿ ಘೋಷಣೆ ಅಧಿಕೃತವಲ್ಲ; ಸ್ಪಷ್ಟನೆ
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸುಳ್ಯ ತಾಲೂಕಿನ ದಿನೇಶ್ ಹೆಸರನ್ನು ಘೋಷಣೆ ಮಾಡಿರುವುದು ಅಧಿಕೃತವಲ್ಲ. ಅಭ್ಯರ್ಥಿಯ ಹೆಸರನ್ನು ರಾಜ್ಯ ಚುನಾವಣಾ ಸಮಿತಿಯಲ್ಲಿ ಚರ್ಚಿಸಿ ಜೆಡಿಎಸ್ ರಾಜ್ಯಾಧ್ಯಕ್ಷರು 22ರ ಬಳಿಕ ಅಧಿಕೃತವಾಗಿ ಬಿಡುಗಡೆಗೊಳಿಸುವರು ಎಂದು ಪುತ್ತೂರು ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಶೀರ್ ಬೂಡಿಯಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಘಟಕದಿಂದ 10ರಿಂದ ಮಾ.10ರವರೆಗೆ ಪ್ರಾಥಮಿಕ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಪುತ್ತೂರು ತಾಲೂಕು ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ಇದ್ದರು.