ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಏ.29ರಂದು ಸಾಮೂಹಿಕ ವಿವಾಹ

Lingaraj Badiger
Updated On : 11 Feb 2013, 11:38 am

ಮೂಲ್ಕಿ: ಕಟೀಲಿನ ದಿ. ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಟ್ರಸ್ಟ್ ಮತ್ತು ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಅಭಿನಂದನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 29ರಂದು ಕಟೀಲಿನ ಕೆ. ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಸಭಾಭವನದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಜರಗಲಿದೆ.
ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಕರಿಮಣಿ ಸರ ನೀಡಲಾಗುವುದೆಂದು ಶ್ರೀ ಕ್ಷೇತ್ರ ಕಟೀಲಿನ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ತಿಳಿಸಿದ್ದು ಹೆಚ್ಚಿನ ಮಾಹಿತಿಗಾಗಿ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕಿನ್ನಿಗೋಳಿಯ ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಸ್ವಾತಿ ಸ್ವೀಟ್ಸ್‌ನ ಸತೀಶ್ ರಾವ್ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

'ಶ್ರೀನಿವಾಸ ಕಲ್ಯಾಣೋತ್ಸವ'
ಮಂಗಳೂರು: ಸಾರ್ವಜನಿಕ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಮಾಲಾಡಿ ಕೋರ್ಟಿನಲ್ಲಿ ಮಂಗಳವಾರ ಸಂಜೆ 5.30ಕ್ಕೆ 'ಶ್ರೀನಿವಾಸ ಕಲ್ಯಾಣೋತ್ಸವ' ನಡೆಯಲಿದೆ.
ಮಂಗಳವಾರ ಬೆಳಗ್ಗೆ 10.45ಕ್ಕೆ ಬಂಟ್ಸ್‌ಹಾಸ್ಟೆಲ್ ಮೈದಾನದಿಂದ ಬಂಗ್ರಕೂಳೂರು, ಕಾವೂರು, ದೇರಬೈಲ್ ಮೂಲಕ ದೇವರ ಮೆರವಣಿಗೆ ಹೊರಟು ಮಾಲಾಡಿ ಕೋರ್ಟಿನಲ್ಲಿ ಕಲ್ಯಾಣೋತ್ಸವ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement