15ರಂದು ಶ್ರೀಮುಡಿ ಭವನ ಉದ್ಘಾಟನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಮುಡಿ ಸಮರ್ಪಣೆ ವ್ಯವಸ್ಥೆಗಾಗಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಮುಡಿ ಭವನ 15 ರಂದು ಉದ್ಘಾಟನೆಗೊಳ್ಳಲಿದೆ. ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷ ಕೆ. ಬಾಪಿರಾಜು ಉದ್ಘಾಟಿಸಲಿದ್ದು, ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ಡಿ.ಕೆ. ಆದಿಕೇಶವುಲು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ವಸಂತ ಬಂಗೇರ ಅತಿಥಿಗಳಾಗಿರುತ್ತಾರೆ ಎಂದು ಡಿ. ಹರ್ಷೇಂದ್ರ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.