ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

19ರಂದು ವೈಭವದ ಮಹಾಮಸ್ತಕಾಭಿಷೇಕ

Lingaraj Badiger
Updated On : 13 Feb 2013, 11:27 am

ಮಂಗಳೂರು: ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ಧ ಶಿರ್ಲಾಲು ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯಲ್ಲಿ 19ರಂದು ವೈಭವದ ಮಹಾಮಸ್ತಕಾಭಿಷೇಕ ನಡೆಯಲಿದೆ.
ಅಂದು ಬೆಳಗ್ಗೆ ನಡೆಯುವ ವಿವಿಧ ಪೂಜಾ ವಿಧಿ ವಿಧಾನಗಳ ಬಳಿಕ ಅಪರಾಹ್ನ 3.30ಕ್ಕೆ  ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಕಾರ್ಕಳ ಜೈನ ಮಠದ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಹಾಗೂ ಮೂಡುಬಿದಿರೆ  ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.
ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ  ಜೈನ್ ಮಿಲನ್ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ವಹಿಸಲಿದ್ದಾರೆ.
ಕೇಂದ್ರ ಸಚಿವ ಎಂ. ವೀರಪ್ಪ ಮೈಲಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಬಿ.ಎಲ್. ಶಂಕರ್, ಕಾರ್ಕಳ ತಾ.ಪಂ. ಸದಸ್ಯ ಸುಜಿತ್ ಕುಮಾರ್ ಭಾಗವಹಿಸಲಿದ್ದಾರೆ.
ಅಗ್ರೋದಕ ಮೆರವಣಿಗೆ: ಸಂಜೆ ವಿವಿಧ  ಜಾನಪದ ತಂಡಗಳ ಸಂಯೋಜನೆಯಲ್ಲಿ ವೈಭವದ ಅಗ್ರೋದಕ ಮೆರವಣಿಗೆ ನಡೆಯಲಿದೆ. ಸುಮಾರು ಎರಡು ಗಂಟೆ ಕಾಲ ಸುಡುಮದ್ದು ಪ್ರದರ್ಶನ, ಲೇಸರ್ ಲೈಟ್ ಶೋ, ಸಿಟಿ ಕಲರ್ ಲೈಟ್ ಶೋ ಪ್ರಮುಖ ಆಕರ್ಷಣೆಯಾಗಲಿದೆ.
ಬೃಹತ್ ಗಾತ್ರದ ಎಲ್.ಇ.ಡಿ ಗೋಡೆ ಮೂಲಕ ಮಸ್ತಕಾಭಿಷೇಕದ ಕಾರ್ಯಕ್ರಮ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ.
ಮನರಂಜನಾ ಕಾರ್ಯಕ್ರಮವಾಗಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ನೃತ್ಯ ವೈಭವ ನಡೆಯಲಿದೆ ಎಂದು  ಕಾರ್ಯಕ್ರಮದ ಸೇವಾರ್ಥಿ, ಮಹಾ ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಮಂಗಳೂರಿನ ಅಭೀಶ್ ಬಿಲ್ಡರ್ರ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಪುಷ್ಪರಾಜ್ ಜೈನ್ ತಿಳಿಸಿದ್ದಾರೆ.

ಮಹಾಮಸ್ತಕಾಭಿಷೇಕಕ್ಕೆ ಉಚಿತ ಬಸ್ ವ್ಯವಸ್ಥೆ
ಶಿರ್ಲಾಲು:  ಫೆ. 19ರಂದು ನಡೆಯುವ ಮಹಾಮಸ್ತಕಾಭಿಷೇಕದಲ್ಲಿ  ಭಾಗವಹಿಸುವ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.   ಅಂದು ನಡೆಯುವ ಕಾರ್ಯಕ್ರಮಕ್ಕೆ ಬೆಳಿಗ್ಗೆ  ಗಂಟೆ 10.00ರಿಂದ   ರಾತ್ರಿ ಘಂಟೆ 11ರವರೆಗೆ  ಅಜೆಕಾರು- ಶಿರ್ಲಾಲು, ಮುಂಡ್ಲಿ - ಶಿರ್ಲಾಲು, ಕಾರ್ಕಳ- ಶಿರ್ಲಾಲು, ಜೋಡುಕಟ್ಟೆ- ಶಿರ್ಲಾಲು,  ಬಜಗೋಳಿ  - ಶಿರ್ಲಾಲು ಮಾರ್ಗವಾಗಿ ಬರುವ ಎಲ್ಲಾ ಭಕ್ತಾದಿಗಳಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement