ಪ್ರೊ.ಹೆರಂಜೆಗೆ ಪ್ರೊ.ಎಸ್ವಿಪಿ ಪ್ರಶಸ್ತಿ
ಮಂಗಳೂರು: ಕಾರ್ಕಳ ಸಾಹಿತ್ಯ ಸಂಘ ಮತ್ತು ಪ್ರೊ.ಎಸ್.ವಿ.ಪಿ. ಸಂಸ್ಮರಣ ಸಮಿತಿಯು ಪ್ರಸಕ್ತ ವರ್ಷದ ಪ್ರೊ.ಎಸ್.ವಿ.ಪಿ ಸಂಸ್ಮರಣ ಪ್ರಶಸ್ತಿಯನ್ನು ಪ್ರೊ. ಹೆರಂಜೆ ಕೃಷ್ಣ ಭಟ್ಟ ಅವರಿಗೆ ನೀಡಲು ನಿರ್ಧರಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಕಾರ್ಯದರ್ಶಿ ಚಂದ್ರಕಲಾ ನಂದಾವರ, ಫೆ.16ರಂದು ಸಂಜೆ 5ಕ್ಕೆ ಕಾರ್ಕಳ ಹೊಟೇಲ್ ಪ್ರಕಾಶ್ನ ಸಂಭ್ರಮ ಸಭಾಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಬಿ.ಎ. ವಿವೇಕ ರೈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ 10 ಸಾವಿರ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ ಎಂದು ತಿಳಿಸಿದರು.