ಇಂದು ಆಶೀಸರ ಜಿಲ್ಲಾ ಪ್ರವಾಸ
ಮಂಗಳೂರು: ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಫೆ. 14 ರಂದು ಜಿಲ್ಲೆಗೆ ಆಗಮಿಸುವರು.
ಬೆಳಗ್ಗೆ 10ಕ್ಕೆ ಸರ್ಕ್ಯೂಟ್ ಹೌಸಿನಲ್ಲಿ ಮುಖ್ಯ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಹಸಿರು ಕವಚ ಯೋಜನೆ ಕುರಿತು ಸಮಾಲೋಚನೆ ನಡೆಸುವರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಅಂಗವಿಕಲ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ತೋಟಗಾರಿಕೆ ಇಲಾಖೆ, ಬಂದರು ಇಲಾಖೆ, ವಾರ್ತಾ ಇಲಾಖೆ ಜತೆ ಸಮಾಲೋಚನೆ ನಡೆಸುವರು. 12.15ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು.
ಪುತ್ತೂರು ಪುರಸಭಾ ಕಚೇರಿಯಲ್ಲಿ ಸಂಜೆ 4.30ಕ್ಕೆ ಪುತ್ತೂರು ಅಸಿಸ್ಟೆಂಟ್ ಕಮಿಷನರ್, ನಗರಸಭೆ ಕಮಿಷನರ್ ಜತೆ ಬಯೋಗ್ಯಾಸ್ ತಂತ್ರಜ್ಞಾನ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಸಮಾಲೋಚನೆ ನಡೆಸುವರು. ಸಂಜೆ 6ಕ್ಕೆ ರಾಘವೇಂದ್ರ ಮಠದಲ್ಲಿ ಗ್ರಾಮ ವಿಕಾಸ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸುವರು.
ಫೆ. 15 ರಂದು ಬೆಳಗ್ಗೆ 10ಕ್ಕೆ ಸುಳ್ಯದಲ್ಲಿ ನಡೆಯುವ ಹಸಿರು ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳುವರು. ಸಂಜೆ 4ಕ್ಕೆ ಪುತ್ತೂರಿನ ಪರಿಸರ ಸಂಘ ಸಂಸ್ಥೆಗಳ ಜತೆ ಸಮಾಲೋಚನೆ ನಡೆಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.