ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮೂಲ್ಕಿ ತಾಲೂಕು ಹೋರಾಟಕ್ಕೆ ಬೆಂಬಲ

Mainashree
Updated On : 13 Feb 2013, 10:07 am

ಮೂಲ್ಕಿ: ಮೂಲ್ಕಿ ತಾಲೂಕು ಮತ್ತು ನ್ಯಾಯಾಲಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಮೂಲ್ಕಿ ತಾಲೂಕು ರಚನೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಧರಣಿ ಸತ್ಯಾಗ್ರಹದ ಅಂತಿಮ ದಿನವಾದ ಬುಧವಾರ ಮಧ್ಯಾಹ್ನ ಮೂರರಿಂದ ಮೂಲ್ಕಿ ಪರಿಸರದಲ್ಲಿ ಅಂಗಡಿಗಳು, ರಿಕ್ಷಾ, ಕಾರು, ಟೆಂಪೋ ಚಾಲಕು ಬಂದ್ ಆಚರಿಸಿ ಬೆಂಬಲ ವ್ಯಕ್ತಪಡಿಸಿದರು. ಹರಿಕೃಷ್ಣ ಪುನರೂರು ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಮೂಲ್ಕಿ ಹೋಬಳಿಯ ಸುಮಾರು 1000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು ಮಧ್ಯಾಹ್ನ ಸುಮಾರು 10 ನಿಮಿಷಗಳ ಕಾಲ ಮೂಲ್ಕಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ನಡೆಸಿ ಹೆದ್ದಾರಿ ಬಂದ್ ಮಾಡುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆಯ ಸೂಚನೆ ನೀಡಿದರು. ಬಳಿಕ ಮೂಲ್ಕಿ ಬಸ್ ನಿಲ್ದಾಣದಿಂದ ಕಾರ್ನಾಡು, ಬೈಪಾಸ್ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement