ರಾಜೀವ್ ಚಂದ್ರಶೇಖರ್ ಅನುದಾನ ಮಂಜೂರು
ಮಂಗಳೂರು: ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರ 2010-11ನೇ ಸಾಲಿನ ಅನುದಾನದಲ್ಲಿ ಸುಳ್ಯ ತಾಲೂಕು ಅರಂತೋಡು ಗ್ರಾಮದ ತೆಕ್ಕಿಲ್ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಶೇ.50ರಷ್ಟು ಅಂದರೆ 2.50 ಅನುದಾನದ ಚೆಕ್ನ್ನು ಸುರತ್ಕಲ್ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ನೀಡಿದ್ದು ಕಾಮಗಾರಿಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.