ಸಾರಿಗೆ ಸಂಸ್ಥೆ ಚಾಲಕ, ನಿರ್ವಾಹಕರ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ
ವಿಟ್ಲ: ವಿದ್ಯಾರ್ಥಿಗಳಿಗೆ ಬಸ್ ಪಾಸನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾರಿಗೆ ಸಂಸ್ಥೆಯ ವೇಗದೂತ ಬಸ್ಸಿನ ಚಾಲಕ ಹಾಗೂ ನಿರ್ವಾಹಕನಿಗೆ ಥಳಿಸಿದ ಘಟನೆ ಮಾಣಿ ಜಂಕ್ಷನ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಬಸ್ಸು ನಿರ್ವಾಹಕ ಹಾಗೂ ಚಾಲಕ, ವಿದ್ಯಾರ್ಥಿಯೊಬ್ಬನಿಗೆ ಹಲ್ಲೆ ನಡೆಸಿದ ಘಟನೆಯೂ ನಡೆದಿದೆ. ಬಂಟ್ವಾಳ ಘಟಕ ಬಸ್ಸು ನಿರ್ವಾಹಕ ಕೃಷ್ಣಪ್ಪ ಹಾಗೂ ಚಾಲಕ ಸಂತೋಷ್ ಹಲ್ಲೆಗೊಳಗಾಗಿದ್ದು, ಮಾಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಾಣಿ ನಿವಾಸಿ ವಿದ್ಯಾರ್ಥಿ ತಿಲಕ್ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಟ್ಲ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಮಾಣಿ ನಿವಾಸಿಗಳಾದ ತಿಲಕ್, ಸುಶಾಂತ್, ಅನಂತಾಡಿ ನಿವಾಸಿ ವಸಂತ, ಬರಿಮಾರ್ ನಿವಾಸಿ ಪರಮೇಶ್ವರ, ದಯಾನಂದ ಹಾಗೂ ಇತರರ ವಿರುದ್ಧ ಬಸ್ಸು ನಿರ್ವಾಹಕ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಬಸ್ಸು ನಿರ್ವಾಹಕ ಕೃಷ್ಣಪ್ಪ ಹಾಗೂ ಚಾಲಕ ಸಂತೋಷ್ ವಿರುದ್ಧವು ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.