17ರಂದು ಅಧ್ಯಾಪಕರ ಸಹಕಾರಿ ಸಂಘ ಕಟ್ಟಡ ಉದ್ಘಾಟನೆ
ವಿಟ್ಲ: ಅಧ್ಯಾಪಕರ ಸಹಕಾರ ಸಂಘದ ಸ್ವಂತ ಕಟ್ಟಡವನ್ನು 5 ಸೆಂಟ್ಸ್ ಜಾಗದಲ್ಲಿ ಸುಮಾರು ರು. 70 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಫೆ.17ರಂದು ಉದ್ಘಾಟನೆ ನಡೆಯಲಿದೆ ಎಂದು ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಟ್ಟಡದ ಉದ್ಘಾಟನೆಯನ್ನು ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿದ್ದು, ಭದ್ರತಾ ಕೊಠಡಿಯನ್ನು ಜಿಪಂ ಅಧ್ಯಕ್ಷ ಕೊರಗಪ್ಪ ನಾಯ್ಕ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ಬಿ. ರಮಾನಾಥ ರೈ ವಹಿಸಲಿದ್ದಾರೆ. ಪುತ್ತೂರು ಶಾಸಕ ಮಲ್ಲಿಕಾ ಪ್ರಸಾದ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ್, ಕ್ಯಾಂಪ್ಕೊ ಅಧ್ಯಕ್ಷ ಪದ್ಮನಾಭ ಕೊಂಕೋಡಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಟಿ. ಶೈಲಜಾ ಭಟ್ ಭಾವಹಿಸಲಿದ್ದಾರೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷ ಡಾ.ಎಂ. ಸಿದ್ದರಾಜು ಅಳಿಕೆ, ಎಂ. ಹರಿಶ್ಚಂದ್ರ, ಜೆಸಿಂತಾ ಸೋಫಿಯ ಮಸ್ಕರೇನಸ್, ಎಸ್. ಗಿರಿಯಪ್ಪ ಗೌಡ, ಕೆ. ಮೋನಪ್ಪ, ಬಿ. ಸದಾನಂದ ಶೆಟ್ಟಿ, ಜನರಲ್ ಮ್ಯಾನೇಜರ್ ಕೃಷ್ಣಪ್ರಕಾಶ್, ಮಾಜಿ ನಿರ್ದೇಶಕ ಮಾವೆ ಸೀತಾರಾಮ ಭಟ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.