ಇಂದು ಕರ್ಣಾಟಕ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ
ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಕಚೇರಿ ಸಭಾಭವನದಲ್ಲಿ ಸೋಮವಾರ ಸಂಜೆ 4.30ಕ್ಕೆ ಬ್ಯಾಂಕ್‌ನ 89ನೇ ಸಂಸ್ಥಾಪಕರ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎಂ.ಎನ್. ವೆಂಕಟಾಚಲಯ್ಯ ಸ್ಥಾಪಕರ ದಿನಾಚರಣೆಯ ಉಪನ್ಯಾಸ ನೀಡುವರು. ಚೆನ್ನೈನ ಗಣೇಶ್, ಕುಮರೇಶ್ ಅವರಿಂದ ದ್ವಂದ್ವ ಪಿಟೀಲು ವಾದನ ನಡೆಯಲಿದೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.