ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಮುಂದುವರೆದ ಮಳೆ ತಂಪಾಯಿತು ಇಳೆ

Parashurama
Updated On : 17 Feb 2013, 10:39 am

ಮಂಗಳೂರು/ಮಡಿಕೇರಿ: ಮಂಗಳೂರು ಸಹಿತ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಹಲವೆಡೆ ಭಾನುವಾರವೂ ಧಾರಾಕಾರ ಮಳೆ ಸುರಿದಿದ್ದು, ಹಳ್ಳಕೊಳ್ಳಗಳಲ್ಲಿ ನೀರು ಓತಪ್ರೋತವಾಗಿ ಹರಿಯಿತು.
ಮಳೆಯಿಂದ ನಗರದ ಮೊಗವೀರಪಟ್ಣ, ಕೊಡಿಯಾಲಬೈಲ್‌ಗಳಲ್ಲಿ ಚರಂಡಿ ಭರ್ತಿಯಾಗಿ ಮಳೆನೀರು ರಸ್ತೆಯಲ್ಲೇ ಹರಿದು, ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ದೇರೆಬೈಲ್, ಜೆಪ್ಪಿನಮೊಗರು ಪ್ರದೇಶಗಳಲ್ಲಿ ಕೊಳಚೆ ನೀರು ರಸ್ತೆಗೆ ಬಂದು ಕೃತಕ ನೆರೆ ಸೃಷ್ಟಿಯಾಯಿತು. ಪುತ್ತೂರು ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಮಧ್ಯಾಹ್ನ 15 ನಿಮಿಷಗಳ ಕಾಲ ಧಾರಾಕಾರ ಸುರಿದ ಮಳೆಯಿಂದ ವಾತಾವರಣ ತಂಪಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement