ಸಂಸ್ಥಾಪಕರ ದಿನ
ಮಂಗಳೂರು: ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಕಚೇರಿ ಸಭಾಭವನದಲ್ಲಿ ಸೋಮವಾರ ಸಂಜೆ 4.30ಕ್ಕೆ ಬ್ಯಾಂಕ್‌ನ 89ನೇ ಸಂಸ್ಥಾಪಕರ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುಪ್ರಿಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಎಂ.ಎನ್. ವೆಂಕಟಾಚಲಯ್ಯ ಉಪನ್ಯಾಸ ನೀಡುವರು. ಚೆನ್ನೈನ ಗಣೇಶ್, ಕುಮರೇಶ್ ಅವರಿಂದ ದ್ವಂದ್ವ ಪಿಟೀಲು ವಾದನ ನಡೆಯಲಿದೆ ಎಂದು ಬ್ಯಾಂಕ್ ಪ್ರಕಟಣೆ ತಿಳಿಸಿದೆ.