28 ರಂದು ರಾಜ್ಯ ಮಾನವ ಹಕ್ಕು ಆಯೋಗ ಅಧ್ಯಕ್ಷ ಜಿಲ್ಲೆಗೆ
ಮಂಗಳೂರು: ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸಿ.ಜಿ. ಹುನಗುಂದ ಫೆ. 28 ರಂದು ಮಂಗಳೂರಿಗೆ ಆಗಮಿಸುವರು. ಮಾ. 1ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಸೂಪರಿಟೆಂಡೆಂಟ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಾನವ ಹಕ್ಕುಗಳ ಬಗ್ಗೆ ಚರ್ಚೆ ನಡೆಸುವರು. ಸಂಜೆ 3.30ಕ್ಕೆ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡುವರು.
ಮಾ.2 ರಂದು ಸಂಜೆ 4 ರಿಂದ 5ರ ತನಕ ಸರ್ಕ್ಯೂಟ್ ಹೌಸಿನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಾ. 3 ರಂದು ಹಾಸನಕ್ಕೆ ತೆರಳುವರು.
ರಾಜ್ಯಪಾಲ ನಾಳೆ ಮಂಗಳೂರಿಗೆ
ಮಂಗಳೂರು: ಕರ್ನಾಟಕದ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಫೆ. 23ರಂದು ಬೆಳಗ್ಗೆ 11.25ಕ್ಕೆ ಮಂಗಳೂರಿಗೆ ಆಗಮಿಸುವರು. ಅಪರಾಹ್ನ 12ಕ್ಕೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ರಾತ್ರಿ 7.45ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.